ದಾವಣಗೆರೆ.ಏ.23- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಪರ್ಕ ನಿಗಮ ಇವರ ಸಹಯೋಗದಲ್ಲಿ ನಗರದ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್ಗಳಿಗೆ ಮತದಾನ ಜಾಗೃತಿ ಸ್ಟಿಕ್ಕರ್ ಅಳವಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಅವರು `ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ, ಚುನಾವಣಾ ಪರ್ವ ದೇಶದ ಗರ್ವ’ ಎಂಬ ಶೀರ್ಷಿಕೆಯ ಸ್ಟಿಕ್ಕರನ್ನು ಅನಾವರಣಗೊಳಿಸಿ ಮೇ 7 ರಂದು ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಇ. ಶ್ರೀನಿವಾಸ್ ಮೂರ್ತಿ, ವಿಭಾಗೀಯ ತಾಂತ್ರಿಕ ಅಭಿಯಂತರ ವೆಂಕಟೇಶ್, ವಿಭಾಗೀಯ ಸಂಚಲನಾಧಿಕಾರಿ ಫಕೃದ್ದೀನ್, ಆಡಳಿತಾಧಿಕಾರಿ ರಾಜಶೇಖರ್ ಕಂಬಾರ, ವ್ಯವಸ್ಥಾಪಕ ಎಂ.ರಾಮಚಂದ್ರಪ್ಪ, ಲೆಕ್ಕಾಧಿಕಾರಿ ಚೆಲುವೇಗೌಡ, ನಗರ ಸಾರಿಗೆ ಘಟಕದ ವ್ಯವಸ್ಥಾಪಕ ಮರುಳುಸಿದ್ದಪ್ಪ, ನಿಲ್ದಾಣಾಧಿಕಾರಿ ಸಿದ್ದೇಶ್ ಹಾಗೂ ಇನ್ನಿತರೆ ಸಿಬ್ಬಂದಿಗಳು ಭಾಗವಹಿಸಿದ್ದರು.