ಕೊಮಾರನಹಳ್ಳಿಯಲ್ಲಿ ಸಂಭ್ರಮದ ಬ್ರಹ್ಮ ರಥೋತ್ಸವ

ಕೊಮಾರನಹಳ್ಳಿಯಲ್ಲಿ ಸಂಭ್ರಮದ ಬ್ರಹ್ಮ ರಥೋತ್ಸವ

ಮಲೇಬೆನ್ನೂರು, ಏ.23- ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಮಂಗಳವಾರ ಮಧ್ಯಾಹ್ನ ಅಪಾರ ಭಕ್ತರ ಸಮ್ಮುಖದಲ್ಲಿ ವಾದ್ಯ ಮೇಳಗಳೊಂದಿಗೆ ಸಂಭ್ರಮದಿಂದ ಜರುಗಿತು. ರಥ ಪೂಜೆ ನಂತರ ರಥದಲ್ಲಿ ಶ್ರೀ ರಂಗನಾಥ ಸ್ವಾಮಿ ಮೂರ್ತಿ ಇಟ್ಟು ಪೂಜೆ ಸಲ್ಲಿಸಿದ ಬಳಿಕ ಉಪ ತಹಸೀಲ್ದಾರ್ ಆರ್. ರವಿ ಅವರು ತೇರಿನ ಗಾಲಿಗೆ ಕಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು. ನಂತರ ಭಕ್ತರು ಹಾಗೂ ಗ್ರಾಮಸ್ಥರು ಸೇರಿ ರಥವನ್ನು ಎಳೆದು ಸಂಭ್ರಮಿಸಿದರು. ರಥೋತ್ಸವದ ವೇಳೆ ಭಕ್ತರು ರಥದ ಮೇಲೆ ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಥೋತ್ಸವದ ನಂತರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ನಡೆಯಿತು. ಸಂಜೆ ಗ್ರಾಮಸ್ಥರು ಸಂಪ್ರದಾಯದಂತೆ ಪುನಃ ರಥವನ್ನು ಎಳೆದರು.

error: Content is protected !!