ಹರಪನಹಳ್ಳಿ, ಏ. 24 – ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆಪಿಸಿಸಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಸದಸ್ಯರನ್ನಾಗಿ ಹರಪನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷ ಪ್ರತಾಪ್ ಛಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೋಮಶೇಖರ್ ಬಣ್ಣದ ಮನೆ ತಿಳಿಸಿದ್ದಾರೆ.
ಹೊಸಪೇಟೆ ತಾಲ್ಲೂಕಿನ ಜಿಲ್ಲಾಧ್ಯಕ್ಷರ ಸಭಾಂಗಣದಲ್ಲಿ ಜರುಗಿದ ಸುದ್ದಿ ಗೋಷ್ಠಿಯಲ್ಲಿ ವಿಜಯನಗರ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್ ಮಾತನಾಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮಣ್ಣಪ್ಪ, ಸೇವಾದಳ ಜಿಲ್ಲಾ ಸಂಘಟಕ ಬಿ. ಮಾರೆಣ್ಣ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಡಿ. ವೆಂಕಟರಮಣ,ಇನ್ ಟೆಕ್ ವಿಭಾಗದ ಜಿಲ್ಲಾಧ್ಯಕ್ಷ ಏಕಾಂಬರೇಶ ನಾಯ್ಕ, ಮುಖಂಡ ಕೋರಿ ಶಿವರಾಮಪ್ಪ ಇತರರು ಉಪಸ್ಥಿತರಿದ್ದರು.