ಹರಪನಹಳ್ಳಿ : ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನಕ್ಕೆ ಚಾಲನೆ

ಹರಪನಹಳ್ಳಿ : ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನಕ್ಕೆ ಚಾಲನೆ

ಹರಪನಹಳ್ಳಿ, ಏ. 26 – ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುರುವಾರ ಮತದಾನಕ್ಕೆ ಚಾಲನೆ ನೀಡಲಾಯಿತು.

ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಚಿದಾನಂದ ಗುರು ಸ್ವಾಮಿ, ತಹಶೀಲ್ದಾರ್ ಗಿರೀಶ್‍ಬಾಬು ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು.

ಮತದಾನಕ್ಕೆ ನೋಂದಾಯಿಸಿ ಕೊಂಡಿದ್ದ ತಾಲ್ಲೂಕಿನ ವಿವಿಧ ಗ್ರಾಮ ಗಳ ಮನೆಗಳಿಗೆ ಚುನಾವಣಾಧಿಕಾರಿ ಗಳು, ಸಿಬ್ಬಂದಿ ಭೇಟಿ ನೀಡಿ ಚುನಾ ವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಕ್ರಿಯೆ ನಡೆಸಿದರು, ತಾಲ್ಲೂಕಿನಲ್ಲಿ ಒಟ್ಟು 238 ಮತದಾ ರರ ಮತದಾನಕ್ಕೆ ಹೆಸರು ನೋಂದಾಯಿ ಸಿಕೊಂಡಿದ್ದು, ಗುರುವಾರ 210 ಮತ ದಾರರು ತಮ್ಮ ಹಕ್ಕು ಚಲಾಯಿಸಿದರು.

error: Content is protected !!