ಮದುವೆ ಊಟ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ಸಿದ್ದೇಶ್ವರ ಭೇಟಿ

ಮದುವೆ ಊಟ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ಸಿದ್ದೇಶ್ವರ ಭೇಟಿ

ದಾವಣಗೆರೆ, ಏ.29- ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ಮದುವೆ ಊಟ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರನ್ನು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. 96 ಕ್ಕೂ ಹೆಚ್ಚು ಅಸ್ವಸ್ಥರಲ್ಲಿ 22 ಮಕ್ಕಳು ಇದ್ದರು. ಅವರ ಆರೋಗ್ಯ ವಿಚಾರಿಸಿ, ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಚಿಕಿತ್ಸೆ ನೀಡಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ  ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಜೊತೆಯಲ್ಲಿದ್ದರು.

error: Content is protected !!