ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ

ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ

ಹರಿಹರ ಕ್ಷೇತ್ರದಲ್ಲಿ ಬಿಜೆಪಿ ಪರ ಮಾಜಿ ಸಚಿವ ಮಾಧುಸ್ವಾಮಿ ಪ್ರಚಾರ

ಮಲೇಬೆನ್ನೂರು, ಮೇ 3- ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಶುಕ್ರವಾರ ಜಿಗಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಎನ್.ಆರ್.ಇಂದೂಧರ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಈ ಬಾರಿ ಮಹಿಳೆಯರು ಹೊರ ಬಂದು ಏನೂ ಕೇಳುತ್ತಿಲ್ಲ. ಹಾಗಂತ ಎಲ್ಲಾ ಮಹಿಳೆಯರು ಗ್ಯಾರಂಟಿಗಳಿಂದಾಗಿ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂದರ್ಥ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು, ದೇಶದ ಭದ್ರತೆ, ಅಭಿವೃದ್ಧಿ ದೃಷ್ಟಿಯಿಂದ ಜನ ಮೋದಿಯವರನ್ನು ಈ ಬಾರಿಯೂ ಬೆಂಬಲಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದರು.

ತುಮಕೂರಿನಲ್ಲಿ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿದಾಗ ವಿರೋಧ ಮಾಡಿದ್ದು ನಿಜ. ನಂತರ ವರಿಷ್ಠರ ಸೂಚನೆ ಮೇರೆಗೆ ಮತ್ತು ಪಕ್ಷದ ಹಿತದೃಷ್ಠಿಯಿಂದ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ ಮಾಧುಸ್ವಾಮಿ ಅವರು, ಮೈಸೂರು, ತುಮಕೂರು ಮತ್ತು ದಾವಣಗೆರೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿಗೆ ಅನುಕೂಲವಾಗಲಿದೆ ಎಂದರು.

ಮೋದಿ ಅಲೆ ಎಲ್ಲಾ ಕಡೆ ಇದ್ದು, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಜವಾಗಿಯೇ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಸುಮಲತಾ ಅವರನ್ನು ಸೇರಿ 27 ಕ್ಷೇತ್ರಗಳಲ್ಲಿ ಗೆಿದ್ದಿದ್ದೇವು. ಈ ಬಾರಿ 28 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದು ಮಾಧುಸ್ವಾಮಿ ಅವರು, ಕೇಂದ್ರದಲ್ಲಿ ಸರ್ಕಾರ ರಚಿಸುವಷ್ಟು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ. ಹಾಗಾಗಿ ಅವರು ಸ್ವಾತಂತ್ರ್ಯವಾಗಿ ಅಧಿಕಾರಕ್ಕೆ ಬರುವ ಪ್ರಶ್ನೇಯೇ ಇಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಪ್ರಜ್ವಲ್ ರೇವಣ್ಣ ಅವರು ನಡೆಸಿದ್ದಾರೆನ್ನಲ್ಲಾದ ಲೈಂಗಿಕ ಶೋಷಣೆಯನ್ನು ಮಾನವೀಯತೆ ದೃಷ್ಠಿಯಿಂದ ಖಂಡಿಸುತ್ತೇನೆ. ಈ ಪ್ರಕರಣದಲ್ಲಿ ಸಾಕ್ಷ್ಯ ಒದಗಿಸುವುದು ಕಷ್ಟ ಎಂಬ ಮಾತು ಕೇಳಿ ಬರುತ್ತಿವೆ ಎಂದು ಮಾಧುಸ್ವಾಮಿ ಹೇಳಿದರು.

ನಂತರ ಮಾಧುಸ್ವಾಮಿ ಅವರು, ಜಿ.ಬೇವಿನಹಳ್ಳಿ, ಹಳ್ಳಿಹಾಳ್, ಕೊಕ್ಕನೂರು, ಮೂಗಿನಗೊಂದಿ, ಹಿಂಡಸಘಟ್ಟ, ಗೋವಿನಹಾಳ್, ನಂದಿಗುಡಿ, ಉಕ್ಕಡಗಾತ್ರಿ, ವಾಸನ, ಪಾಳ್ಯ, ಕೆ.ಎನ್.ಹಳ್ಳಿ, ಎಕ್ಕೆಗೊಂದಿ, ನಂದಿತಾವರೆ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಪರ ಪ್ರಚಾರ ನಡೆಸಿದರು.

ಶಾಸಕ ಬಿ.ಪಿ.ಹರೀಶ್, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ತಾ.ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ತಾ. ಬಿಜೆಪಿ ಕಾರ್ಯದರ್ಶಿ ಆದಾಪುರ ವೀರೇಶ್, ನಂದಿತಾವರೆಯಲ್ಲಿ ಮಂಜುಳಮ್ಮ, ಎನ್.ಪಿ.ಬಸವಲಿಂಗಪ್ಪ, ಎನ್.ಪಿ.ವಿಜಯಕುಮಾರ್, ಜಿ.ಪಿ.ಹನುಮಗೌಡ ಮತ್ತಿತರರು ಈ ವೇಳೆ ಹಾಜರಿದ್ದರು.

error: Content is protected !!