ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಅವಶ್ಯಕ ಜಗಳೂರು ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ

ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಅವಶ್ಯಕ ಜಗಳೂರು ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ

ಜಗಳೂರು, ಮೇ 3 – ಶೋಷಿತ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಆಡಳಿತ ಅವಶ್ಯಕ ಎಂದು ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ ಅಭಿಪ್ರಾಯಿಸಿದರು.

ಗುರುವಾರ ತಾಲ್ಲೂಕಿನ ಕ್ಯಾಸೇನಹಳ್ಳಿ, ಸೊಕ್ಕೆ, ತಾರೇಹಳ್ಳಿ ಸೇರಿದಂತೆ ಎಸ್‌ಸಿ ಕಾಲೋನಿಗಳಲ್ಲಿ  ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮತಯಾಚನೆ ನಡೆಸಿ ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಬಡ, ಶೋಷಿತ ವರ್ಗಗಳ ಕುಟುಂಬದ ನಿರುದ್ಯೋಗಿ ಯುವಕರಿಗೆ ಉದ್ಯೋಗ, ರೈತರಿಗೆ ಸಾಲ ಮನ್ನಾ, ಪ್ರತಿಯೊಬ್ಬ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ, ಮನರೇಗಾ ಯೋಜನೆಯಡಿ ಕೂಲಿ ಕನಿಷ್ಠ ವೇತನ 400 ಗ್ಯಾರಂಟಿ ಕಾರ್ಡ್ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಲಾಗುತ್ತದೆ.   ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗದವರಿಗೆ ವರದಾನವಾಗಿದ್ದು ಪಕ್ಷದ ಗೆಲುವಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

ದೇಶದ ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷದ ಆಡಳಿತ ಅನಿವಾರ್ಯ.   ಸಂವಿಧಾನಬದ್ದ ಹಕ್ಕುಗಳನ್ನು ಸದ್ಬಳಕೆ ಮಾಡಿಕೊಂಡು ದಲಿತ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಕರೆ ನೀಡಿದರು.

ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಛಲವಾದಿ ಸಮಾಜದ ಗೌರವ ಅಧ್ಯಕ್ಷ ಸಿ.ಲಕ್ಷ್ಮಣ, ತಾಲ್ಲೂಕು ಅಧ್ಯಕ್ಷ ನಿಜಲಿಂಗಪ್ಪ, ಮಾದಿಹಳ್ಳಿ ಮಂಜುನಾಥ್, ಗ್ರಾ.ಪಂ ಸದಸ್ಯರಾದ ಸೊಕ್ಕೆ ರಾಜು, ಭರಮಸಮುದ್ರ ತಿಪ್ಪೇಸ್ವಾಮಿ, ಮಾಜಿ ಸದಸ್ಯ ಚಂದ್ರಪ್ಪ, ಶ್ರೀನಿವಾಸ್, ತಿಪ್ಪೇಸ್ವಾಮಿ ಮುಂತಾದವರು ಇದ್ದರು.

error: Content is protected !!