ದಾವಣಗೆರೆ, ಮೇ 6- ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಮೊನ್ನೆ ನಗರಕ್ಕಾಗಮಿಸಿದ್ದ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲೊಂದಾದ ದಾವಣಗೆರೆ – ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಭೇಟಿ ನೀಡಿದ್ದರು.
ಬ್ಯಾಂಕಿನ ಅಧ್ಯಕ್ಷ ಎನ್.ಎ. ಮುರುಗೇಶ್ ಅವರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬರ ಮಾಡಿಕೊಂಡು ಸನ್ಮಾನಿಸಿ, ಗೌರವಿಸಿದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಉಪಸ್ಥಿತರಿದ್ದರು.
ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಮತಿ ಜಯಮ್ಮ ಪರಶುರಾಮಪ್ಪ, ವ್ಯವಸ್ಥಾಪನಾ ಮಂಡಲಿಯ ಅಧ್ಯಕ್ಷರೂ ಆಗಿರುವ ನಿರ್ದೇಶಕ ಎ.ಹೆಚ್. ಕುಬೇರಪ್ಪ, ನಿರ್ದೇಶಕರುಗಳಾದ ಕಿರುವಾಡಿ ವಿ. ಸೋಮಶೇಖರ್, ಶಂಕರ್ ಖಟಾವ್ಕರ್, ಎಸ್.ಕೆ. ಪ್ರಭು ಪ್ರಸಾದ್, ಕೆ.ಎಂ. ಜ್ಯೋತಿ ಪ್ರಕಾಶ್, ಪಿ.ಹೆಚ್. ವೆಂಕಪ್ಪ, ಬಿ. ನಾಗೇಂದ್ರಚಾರಿ, ಬಿ. ಚಿದಾನಂದಪ್ಪ, ಎ. ಕೊಟ್ರೇಶ್, ಶ್ರೀಮತಿ ಉಮಾ ವಾಗೀಶ್, ವಿಶಾಲ್ ಕುಮಾರ್ ಆರ್. ಸಂಘವಿ, ಶ್ರೀಮತಿ ಅನಿತಾ ಕೋಗುಂಡಿ ಪ್ರಕಾಶ್,
ಶ್ರೀಮತಿ ಅನೂಪ ಡಾ|| ವೀರೇಂದ್ರಸ್ವಾಮಿ, ವೃತ್ತಿಪರ ನಿರ್ದೇಶಕರಾದ ಆರ್.ವಿ. ಶಿರಸಾಲಿಮಠ, ಕಿರಣ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಮಂಡಲಿಯ ಸದಸ್ಯರಾದ ಕೆ.ಎಂ. ಬಸವರಾಜ್, ಶ್ರೀಮತಿ ಜಿ.ಸಿ. ವಸುಂಧರ, ಮತ್ತು ಶ್ರೀಮತಿ ಶೈಲಾ ಹಾಲಸ್ವಾಮಿ ಕಂಬಳಿ ಹಾಗೂ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎನ್. ತುಳಸಿನಾಥ್, ಉಪ ಪ್ರಧಾನ ವ್ಯವಸ್ಥಾಪಕರಾದ ಕೆ.ಎಂ. ರುದ್ರಮುನಿ, ಕೆ.ಎಂ. ನಟರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.