ದಾವಣಗೆರೆ, ಮೇ 6- ನಗರದ ಕನ್ನಡ ಕುವೆಂಪು ಭವನದಲ್ಲಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಯಿ ಕನ್ನಡ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿಗೆ 1915 ಮೇ 5 ರಂದು ಸ್ಥಾಪನೆ ಮಾಡಿದ ಅಂದಿನ ಮೈಸೂರು ಮಹಾ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿವೃದ್ಧಿಗೆ ಸಹಕರಿಸಿದ ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ತಾಲ್ಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ಗೌರವ ಕಾರ್ಯದರ್ಶಿಗಳಾದ ದಾಗಿನಕಟ್ಟಿ ಪರಮೇಶಪ್ಪ, ನಾಗರಾಜ್ ಸಿರಿಗೆರೆ ನಿರ್ದೇಶಕರಾದ ಷಡಕ್ಷರಪ್ಪ ಎಂ. ಬೇತೂರು, ಆರ್. ಶಿವಕುಮಾರ್ ಹಾಗೂ ಇತರೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.