ಎಲೆಬೇತೂರಿನಲ್ಲಿ ಇಂದು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ಎಲೆಬೇತೂರಿನಲ್ಲಿ ಇಂದು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ದಾವಣಗೆರೆ ಸಮೀಪದ ಎಲೆಬೇತೂರಿನಲ್ಲಿ ವಿಶ್ವಗುರು ಮತ್ತು ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯ ಪ್ರಯುಕ್ತ ಗ್ರಾಮದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವು ಇಂದು ನಡೆಯಲಿದೆ.  ಬೆಳಿಗ್ಗೆ 8 ಗಂಟೆಗೆ ಬಸವೇಶ್ವರರ ಮೂರ್ತಿಯನ್ನು ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ನಡೆಯಲಿದೆ. 

error: Content is protected !!