ದಾವಣಗೆರೆ, ಮೇ 15 – ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ `ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸ್ಥಾಪನಾ ದಿನಾಚರಣೆ’ಯಲ್ಲಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕವಾಗಿರುವ ಕೆ.ರಾಘವೇಂದ್ರ ನಾಯರಿಯವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ರಾಘವೇಂದ್ರ ನಾಯರಿ ಅವರಿಗೆ ಜಿಲ್ಲಾ ಕಸಾಪದಿಂದ ಸನ್ಮಾನ
