ವಯೋನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಇಲಾಖೆ ಬೀಳ್ಕೊಡುಗೆ

ವಯೋನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಇಲಾಖೆ ಬೀಳ್ಕೊಡುಗೆ

ದಾವಣಗೆರೆ, ಮೇ 15 – ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಾದ ಹೊನ್ನಾಳಿ ಪೊಲೀಸ್ ಠಾಣೆಯ ಪಿಎಸ್‌ಐ ಓ.ಜಿ. ಏಕಾಂತಪ್ಪ ಹಾಗೂ ಸಿಇಎನ್ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ನಾಗರಾಜ ಅವರನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿದರು. ನಿವೃತ್ತ ಜೀವನಕ್ಕೆ ಶುಭ ಕೋರಿ ಬೀಳ್ಕೊಟ್ಟರು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಮೆಹಬೂಬ್ ಸೇರಿದಂತೆ ಕಛೇರಿ ಸಿಬ್ಬಂದಿಗಳು ಮತ್ತು ನಿವೃತ್ತ ಅಧಿಕಾರಿಗಳ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

error: Content is protected !!