ಪಕ್ಷಭೇದ ಮರೆತು ನನ್ನನ್ನು ಗೆಲ್ಲಿಸಿ

ಪಕ್ಷಭೇದ ಮರೆತು ನನ್ನನ್ನು ಗೆಲ್ಲಿಸಿ

ಹರಪನಹಳ್ಳಿ ಪ್ರಚಾರ ಸಭೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಮನವಿ

ಹರಪನಹಳ್ಳಿ, ಮೇ 26- ಪಕ್ಷ ಭೇದ ಮರೆತು ನನ್ನನ್ನು ಗೆಲ್ಲಿಸಿದರೆ, ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯು ಪ್ರತಿ ಬಾರಿ ಕಲಬುರಗಿ, ಬೀದರ್ ಮತ್ತು ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ. ಇದರಿಂದ ಅಖಂಡ ಬಳ್ಳಾರಿ ಸೇರಿದಂತೆ ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದೇನೆ. ಈ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ ಆದರೆ ಪಕ್ಷ ನನಗೆ ಅವಕಾಶ ನೀಡದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ, ಪ್ರತಾಪ್ ರೆಡ್ಡಿ ಅವರು ವಿಧಾನ ಪರಿಷತ್‌ಗೆ ಆಯ್ಕೆಯಾದರೆ ಈ ಭಾಗದ ಅಭಿವೃದ್ಧಿ ಜತೆಗೆ ಶಿಕ್ಷಣ ಹಾಗೂ ನಿರುದ್ಯೋಗ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡ ಪಾಟೀಲ್ ಬೆಟ್ಟನಗೌಡ ಮಾತ ನಾಡಿ, ಪ್ರತಾಪ್ ರೆಡ್ಡಿ ಅವರನ್ನು ಗೆಲ್ಲಿಸಿದರೆ ಪದ ವೀಧರರ ಸಮಸ್ಯೆಗಳು ಸರಿಯಾಗಲಿವೆ ಎಂದರು. ಕಸಾಪ ತಾಲ್ಲೂಕು ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ಮಾತನಾಡಿ, ಕಳೆದ ಬಾರಿ ಅಲ್ಪ ಮತಗಳಿಂದ ಸೋತಿರುವ ನಾರಾ ಪ್ರತಾಪ್ ರೆಡ್ಡಿಯವರಿಗೆ ಈ ಬಾರಿ ಹೆಚ್ಚಿನ ಮತಗಳಿಂದ ಗೆಲ್ಲಿಸೋಣ ಎಂದರು. ಈ ವೇಳೆ ನಿಚ್ಚವನಹಳ್ಳಿ ಪರಶುರಾಮಪ್ಪ, ಪರಮೇಶ್ವರಪ್ಪ, ಕಣವಿಹಳ್ಳಿ ಮಂಜುನಾಥ್, ರಾಜು, ನಂದೀಶ್ ರಾಯಪ್ಪ ಸೇರಿದಂತೆ ಇತರರು ಇದ್ದರು.

error: Content is protected !!