ಬೆಂಗಳೂರು, ಮೇ 27- ನಾಡಿನ ವಿವಿಧ ಸಮುದಾಯ ಸ್ವಾಮೀಜಿಗಳ ನಿಯೋಗವು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ, ವಿವಿಧ ಸಮುದಾಯಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.
ಈ ವೇಳೆ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಬೇಡಿಕೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಗುರುಪೀಠ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಹಡಪದ ಅಪ್ಪಣ್ಣ ಸ್ವಾಮೀಜಿ, ಶ್ರೀ ನಾರಾಯಣ ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಮತ್ತು ಕುಂಬಾರ ಗುರುಪೀಠದ ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ ನಿಯೋಗದಲ್ಲಿದ್ದರು.