ಕೆರೆಯಾಗಳಹಳ್ಳಿಯಲ್ಲಿ ಮನೆ ಹಾನಿ ಶಾಸಕ ಬಸವಂತಪ್ಪ ಪರಿಶೀಲನೆ

ಕೆರೆಯಾಗಳಹಳ್ಳಿಯಲ್ಲಿ ಮನೆ ಹಾನಿ  ಶಾಸಕ ಬಸವಂತಪ್ಪ ಪರಿಶೀಲನೆ

ದಾವಣಗೆರೆ, ಮೇ 28 – ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆ, ಗಾಳಿಯಿಂದ ಮನೆಗಳಿಗೆ ಹಾನಿಯಾದ ಗ್ರಾಮಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕ್ಷೇತ್ರದ ವ್ಯಾಪ್ತಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಭಾರೀ ಮಳೆ, ಗಾಳಿಗೆ ಕಂಡೆಪ್ಪರ ಚಂದ್ರಪ್ಪ, ಸುಶೀಲಮ್ಮ ಎಂಬುವರ ಮನೆ ಕುಸಿದು ಬಿದ್ದು ಸಂಪೂರ್ಣವಾಗಿ ಹಾನಿಯಾಗಿದ್ದು, ವಿಷಯ ತಿಳಿದ ಶಾಸಕ ಕೆ.ಎಸ್. ಬಸವಂತಪ್ಪ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಅವರಿಗೆ ಕರೆ ಮಾಡಿ ಈ ಬಡ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!