ದಾವಣಗೆರೆ ಮೇ 29 – ನಗರದ ಶ್ರೀ ವಿನಾಯಕ ಎಜುಕೇಷನ್ ಸೊಸೈಟಿ ವತಿಯಿಂದ ನಡೆಯುತ್ತಿರುವ ಶ್ರೀ ಮೌನೇಶ್ವರಿ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಯ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ಅವರು ಶ್ರವಣ ನ್ಯೂನ್ಯತ ಮಕ್ಕಳನ್ನು ಪುಷ್ಪಗುಚ್ಚ ನೀಡಿ ಸ್ವಾಗತಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಬರ ಮಾಡಿಕೊಂಡರು. ಸಂಸ್ಥೆಯ ಕಾರ್ಯದರ್ಶಿ ಹೆಚ್.ವಿ. ಗೋಪಾಲಪ್ಪ ಮತ್ತು ಸಿಬ್ಬಂದಿ ವರ್ಗದವರಿಗೆ ಶುಭ ಕೋರಿದರು.
ಶ್ರೀ ಮೌನೇಶ್ವರಿ ಕಿವುಡ, ಮೂಕ ಮಕ್ಕಳ ವಸತಿಯುತ ಶಾಲೆ ಪ್ರಾರಂಭೋತ್ಸವ
