ಜಿಲ್ಲಾ ಪೊಲೀಸ್ ವತಿಯಿಂದ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ

ಜಿಲ್ಲಾ ಪೊಲೀಸ್ ವತಿಯಿಂದ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ

ದಾವಣಗರೆ, ಜೂ 3 – ಪೊಲೀಸ್ ಇಲಾಖೆಗೆ ನೇಮಕ ಹೊಂದಿ ಸುದೀರ್ಘ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್‌ ಅಭಿನಂದಿಸಿ, ಬೀಳ್ಕೊಟ್ಟರು.

ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಜನಪ್ಪ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಎ.ಆರ್.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ವಿ.ನಾಗರಾಜ,  ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧರ್ಮಪ್ಪ ಅವರನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶುಕ್ರವಾರ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್  ಅವರು ನಿವೃತ್ತಿ ಜೀವನಕ್ಕೆ ಶುಭ ಕೋರಿ ಸನ್ಮಾನಿಸಿದರು. 

ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದಿಸಿ, ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಮೆಹಬೂಬ್ ಹಾಗೂ ನಿವೃತ್ತರಾದವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

error: Content is protected !!