ಬಸಾಪುರದಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಬಸಾಪುರದಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಸ್ವಾಗತ

ದಾವಣಗೆರೆ, ಜೂ.3 – ಇಲ್ಲಿಗೆ ಸಮೀಪದ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕೆ.ಎಸ್ ರೇವಣಸಿದ್ದಪ್ಪ ರಂಗಮಂದಿರದ ಆವರಣದಲ್ಲಿ ಗುಲಾಬಿ ಹೂ ನೀಡುವ ಮೂಲಕ ನೂತನ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.

ಗ್ರಾಮದ ಹರೀಶ್ ಕೆ.ಎಲ್. ಬಸಾಪುರ ಮಕ್ಕಳಿಗೆ ಗುಲಾಬಿ ಹೂ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಗುರುಸಿದ್ದಯ್ಯ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ, ಪ್ರಭಾರಿ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

error: Content is protected !!