ಮಲೇಬೆನ್ನೂರು, ಜೂ.3- ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಜಿ.ಆನಂದಪ್ಪ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿದ್ದು, ಮಕ್ಕಳಿಗೆ ಉಚಿತ ಶಿಕ್ಷಣ, ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ, ಬಾಳೇಹಣ್ಣು ಮತ್ತು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ಗುಡ್ಡಪ್ಪ ಅವರು, ಶಿಕ್ಷಣದ ಮಹತ್ವ ತಿಳಿಸಿ, ಪೋಷಕರು ಸರ್ಕಾರದ ಸೌಲಭ್ಯ ಪಡೆದರೆ ಸಾಲದು. ಮಕ್ಕಳ ಶಿಕ್ಷಣದ ಬಗ್ಗೆ ನಿಗಾ ವಹಿಸಬೇಕೆಂದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ವಿ.ನಾಗರಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಿಗುವ ಶಿಕ್ಷಣ ಬೇರೆ ಯಾವ ಶಾಲೆಗಳಲ್ಲೂ ಸಿಗುವುದಿಲ್ಲ ಎಂದರು.
ಎಸ್ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ಮಾಲತೇಶ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಕವಿತಾ ಮಾಕನೂರು ಶಿವು, ಪತ್ರಕರ್ತ ಪ್ರಕಾಶ್, ಎಸ್ಡಿಎಂಸಿ ಸದಸ್ಯರಾದ ಶ್ರೀಮತಿ ರೇಣುಕಾ ನಿಂಗಪ್ಪ, ಶ್ರೀಮತಿ ರತ್ನಮ್ಮ ಬಸವರಾಜ್, ಎಲ್ಕೆಜಿ, ಯುಕೆಜಿ ಕಲಿಕಾ ಕೇಂದ್ರದ ಅಧ್ಯಕ್ಷ ಕೆ.ಎಸ್.ಮಾಲತೇಶ್, ಮಾಜಿ ಅಧ್ಯಕ್ಷ ಡಿ.ಪಿ.ಚಿದಾನಂದ್, ಶಿಕ್ಷಕರಾದ ಲಿಂಗರಾಜ್, ಲೋಕೇಶ್, ಕರಿಬಸಮ್ಮ, ಜಯಶ್ರೀ ಮತ್ತಿತರರು ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕ ನಾಗೇಶ್ ಸ್ವಾಗತಿಸಿದರು. ಶಿಕ್ಷಕ ಮಲ್ಲಿಕಾರ್ಜುನ್ ನಿರೂಪಿಸಿ, ವಂದಿಸಿದರು.