ದಾವಣಗೆರೆ, ಜೂ.11- ನಗರದ ಬಾಪೂಜಿ ವಿದ್ಯಾಸಂಸ್ಥೆಯ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈ-ಟೆಕ್ ಎಜ್ಯುಕೇಷನ್ ಕಾಲೇಜಿನಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮ ದಿನದ ಅಂಗವಾಗಿ ಮತ್ತು ಸಂಸ್ಥೆಯ ಜಂಟಿ ಕಾರ್ಯದರ್ಶಿ ಎಸ್.ಎಸ್. ಮಲ್ಲಿಕಾರ್ಜುನ್ ಅವರ 57ನೇ ಜನ್ಮ ದಿನದ ಅಂಗವಾಗಿ ಕಾಲೇಜಿನಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಬಿ. ವೀರಪ್ಪ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಕೇರ್ ಟ್ರಸ್ಟ್ ಸದಸ್ಯ ಡಾ. ಧನ್ಯಕುಮಾರ್,
ಎಸ್.ಎಸ್. ಮೆಡಿಕಲ್ ಕಾಲೇಜಿನ ರಕ್ತ ಭಂಡಾರದ ಮುಖ್ಯಸ್ಥರಾದ
ಡಾ. ನೀತ, ಕಾಲೇಜಿನ ಉಪನ್ಯಾಸಕ ನವೀನ್, ಸದಾಶಿವಪ್ಪ, ಕೆ. ಸಿದ್ದಲಿಂಗಪ್ಪ, ಮಂಜುನಾಥ ಅವರುಗಳ ನೇತೃತ್ವದಲ್ಲಿ ಶಿಬಿರವನ್ನು ನಡೆಸಲಾಯಿತು.
ಈ ಶಿಬಿರದಲ್ಲಿ ಸುಮಾರು 40 ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ರಕ್ತದಾನ ಮಾಡಿದರು.