ಮಕ್ಕಳಿಗೆ ಭಾರತೀಯ ಸಂಸ್ಕೃತಿ ಕಲಿಸಿ ; ಅರುಣ್‌ ಕುಮಾರ್‌

ಮಕ್ಕಳಿಗೆ ಭಾರತೀಯ ಸಂಸ್ಕೃತಿ ಕಲಿಸಿ ; ಅರುಣ್‌ ಕುಮಾರ್‌

ದಾವಣಗೆರೆ, ಜೂ.11- ಇಂದಿನ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಉತ್ತಮ ಆದರ್ಶ ಗುಣಗಳನ್ನು ಬೆಳೆಸುವ ಮೂಲಕ ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಬೇಕಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ ಕುಮಾರ್ ಕರೆ ನೀಡಿದರು.

ನಗರದ ಮಾಂಟೆಸೊರಿ ಕಾನ್ವೆಂಟ್ ಶಾಲೆಯ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಶಿಸ್ತು, ಪ್ರಾಮಾಣಿಕತೆ, ಮೃದು ಮಾತು, ಮತ್ತು ಭಾಷಾಜ್ಞಾನ ಕಲಿಸುವುದು ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಮಾಂಟೆಸೋರಿ ವಿದ್ಯಾಸಂಸ್ಥೆ ಉತ್ತಮ ಶಿಕ್ಷಣ ನೀಡುತ್ತಿದೆ ಎಂದರು.

ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ದೇಶದ ಆಡಳಿತ ಸೇವೆ, ವೈದ್ಯಕೀಯ ರಂಗ, ತಾಂತ್ರಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಜತೆಗೆ ವಿದೇಶಗಳಲ್ಲೂ ದೇಶದ ಕೀರ್ತಿ ಪತಾಕೆ ಹಾರಿಸಿದ ಬಗ್ಗೆ ಹರ್ಷ ವ್ಯಕ್ತ ಪಡಿಸಿದರು.

ನರ್ಸರಿ ಮಕ್ಕಳಿಗೆ ಬಲೂನ್ ಹಾಗೂ ಪ್ರಾಥಮಿಕ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ಕೊಟ್ಟು ಪುಷ್ಪಾರ್ಚನೆ ಮಾಡಿ, ಆರತಿ ಬೆಳಗಿ ಸ್ವಾಗತಿಸುವ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಮಹಮ್ಮದ್ ಫರ್ಹಾನ್, ಕೋ-ಆರ್ಡಿನೇಟರ್ ರಾಬಿಯಾ, ಆಡಳಿತಾಧಿಕಾರಿ ಮಲ್ಲಮ್ಮ ನಾಗರಾಜ್, ರಶ್ಮಿ ಮತ್ತು ಸಿಬ್ಬಂದಿ ಇದ್ದರು.

error: Content is protected !!