21ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನ

21ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನ

ದಾವಣಗೆರೆ, ಜೂ.12- ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಇದೇ ದಿನಾಂಕ 21ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಿನ್ನೆ ನಡೆದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಯೋಗ ಸಂಸ್ಥೆಗಳ ಸಹಕಾರದಲ್ಲಿ ಯೋಗ ದಿನವನ್ನು ವಿಶೇಷವಾಗಿ ಆಚರಿಸಲಾಗುವುದು ಎಂದು ಹೇಳಿದರು.

ಅಂದು ಬೆಳಗ್ಗೆ 5 ರಿಂದ 6ರ ವರೆಗೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದಿಂದ ಧ್ಯಾನ, 6ರಿಂದ 6.40ರ ವರೆಗೆ ವೇದಿಕೆ ಕಾರ್ಯಕ್ರಮ ಮತ್ತು 6.40ರಿಂದ 7.30ರ ವರೆಗೆ ಯೋಗ ಕಾರ್ಯಕ್ರಮ ನಡೆಯಲಿದ್ದು, 5 ಸಾವಿರಕ್ಕೂ ಹೆಚ್ಚಿನ ಜನರು ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಯು. ಯೋಗೇಂದ್ರ ಕುಮಾರ್ ಯೋಗ ದಿನದ ವಿಶೇಷತೆ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರೀಮತಿ ದುರ್ಗಶ್ರೀ, ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಿಡಿಪಿಐ ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!