ಮಲೇಬೆನ್ನೂರು, ಜೂ.14- ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿ.ಆನಂದಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಪತ್ರಕರ್ತ ಪ್ರಕಾಶ್ ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಮೇಲ್ವಿಚಾರಕ ಮನೋಹರ್ ಅವರು, ಪರಿಸರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀವು ಶಾಲೆ ಅಥವಾ ಮನೆಯ ಮುಂಭಾಗದಲ್ಲಿ ಗಿಡವನ್ನು ನೆಟ್ಟು ಪ್ರತಿನಿತ್ಯ ನೀರು ಹಾಕಿ ಬೆಳೆಸಿ ಪೋಷಿಸಿ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರಚಾರಿ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಗಳಿ ವಲ ಯದ ಮೇಲ್ವಿಚಾರಕ ಹರೀಶ್, ಸೇವಾ ಪ್ರತಿನಿಧಿ ಗಳಾದ ನಾಗರತ್ನ, ಶೋಭಾ, ಎಸ್‌ಡಿಎಂಸಿಯ ವಿಜಯಭಾಸ್ಕರ್, ದೊಡ್ಡಮನಿ ಸತೀಶ್, ಮುದ್ದಪ್ಳ ಶಿವಪ್ಪ, ಶಿಕ್ಷಕರಾದ ಗುಡ್ಡಪ್ಪ, ಶ್ರೀನಿವಾಸ್ ರೆಡ್ಡಿ, ಲೋಕೇಶ್, ಜಯಶ್ರೀ, ಕರಿಬಸಮ್ಮ ಹಾಗೂ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯ ಶಿಕ್ಷಕ ನಾಗೇಶ್ ಸ್ವಾಗತಿಸಿದರು. ಶಿಕ್ಷಕ ಲಿಂಗರಾಜ್ ನಿರೂಪಿಸಿದರು. ಶಿಕ್ಷಕ ಮಲ್ಲಿಕಾರ್ಜುನ್ ವಂದಿಸಿದರು.