ಜಗಳೂರಿನಲ್ಲಿ ಸಂಭ್ರಮದ ಬಕ್ರೀದ್ ಹಬ್ಬದಾಚರಣೆ
ಜಗಳೂರು, ಜೂ. 17- ಹಿಂದೂ, ಮುಸ್ಲಿಂ ಸಹೋದರರೆಲ್ಲರೂ ಶಾಂತಿ, ಸೌಹಾರ್ದತೆ ಯಯಿಂದ ಬದುಕೋಣ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಪಟ್ಟಣದ ಈಗ ಮೈದಾನದಲ್ಲಿ ಇಂದು `ಬಕ್ರೀದ್’ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತ್ಯಾಗ, ಬಲಿದಾನದ ಪ್ರತೀಕವಾಗಿ ರುವ ಬಕ್ರೀದ್ ಹಬ್ಬದ ಈ ಸಂದರ್ಭದಲ್ಲಿ ಧರ್ಮ ಗುರುಗಳ ಉಪದೇಶಗಳನ್ನು ಪಾಲಿಸುವ ಮೂಲಕ ಶಾಂತಿಯುತ ಜೀವನ ನಡೆಸಬೇಕು ಎಂದು ಶಾಸಕರು ಸಲಹೆ ನೀಡಿದರು.
ತಾಲ್ಲೂಕಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ರುವ ಸುಮಾರು 46 ಗ್ರಾಮಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ಅನುದಾನ ಕಲ್ಪಿಸಿ ಕೊಡುವುದಾಗಿ ಶಾಸಕರು ಭರವಸೆ ವ್ಯಕ್ತಪಡಿಸಿದರು.
ಸಿದ್ಧಿ ಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದೆ ತೊಂದರೆ ಉಂಟಾಗಿದ್ದು, ತಕ್ಷಣವೇ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಸ್ಮಶಾನದ ಜಾಗಕ್ಕೆ ಮಂಜೂರಾತಿ ಮಾಡಿಸಿ ಕೊಟ್ಟಿರುವುದಾಗಿ ಶಾಸಕರು ಮಾಹಿತಿ ನೀಡಿದರು.
ಮುಸ್ಲಿಂ ಸಮಾಜದ ಬಾಂಧವರು ಭಿನ್ನಾಭಿಪ್ರಾಯ ಬಿಟ್ಟು ಒಂದಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಂಡುಅಭಿವೃದ್ಧಿ ಅಭಿವೃದ್ಧಿಯಾಗಬೇಕು ಎಂದು ಶಾಸಕ ಬಿ ದೇವೇಂದ್ರಪ್ಪ ಕಿವಿಮಾತು ಹೇಳಿದರು.
ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಬಿಲಾಲ್ ಮಸೀದಿ ಅಧ್ಯಕ್ಷ ಇಮಾಮ್ ಆಲಿ, ಸಮಾಜದ ಮುಖಂಡರಾದ ಕಲಂದರ್ ಖಾನ್, ಇಕ್ಬಾಲ್ ಅಹಮದ್ ಖಾನ್ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಶೀರ್ ಅಹ್ಮದ್, ಪಪಂ ಸದಸ್ಯರಾದ ಮಹಮ್ಮದ್ ಅಲಿ, ಶಕೀಲ್, ಲುಕ್ ಮಾನ್, ಪಪಂ ಮಾಜಿ ಅಧ್ಯಕ್ಷ ಮಹಮದ್ ಅನ್ವರ್ ಸಾಬ್, ಕಾಂಗ್ರೆಸ್ ಮುಖಂಡರಾದ ಬಿ. ಮಹೇಶ್ವರಪ್ಪ ಪಲ್ಲಾಗಟ್ಟೆ ಶೇಖರಪ್ಪ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.