ನಂದಿತಾವರೆ : ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ

ನಂದಿತಾವರೆ : ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ

ಮಲೇಬೆನ್ನೂರು, ಜೂ. 20- ನಂದಿತಾವರೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಗಳು ದುಶ್ಚಟಗಳಿಂದ ದೂರವಿದ್ದು, ಓದು ಮತ್ತು ಪರಿಸರ ಸಂರಕ್ಷಣೆಗೆ ಸಂಕಲ್ಪ ಮಾಡಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜ ನೆಯ ಕೃಷಿ ಅಧಿಕಾರಿ ಮನೋಹರ್ ಅವರು, ಋತುಮಾನಗಳು ಕಾಲ ಕಾಲಕ್ಕೆ ತನ್ನ ವೈಶಿಷ್ಠ್ಯ ಗಳನ್ನು ಪ್ರದರ್ಶಿಸುತ್ತಿವೆ. ಈಗ ಮಳೆಗಾಲ ಬಂದಿ ರುವುದರಿಂದ ಬಿತ್ತನೆ, ನಾಟಿ ಮಾಡುವುದಕ್ಕೆ ಸಕಾ ಲವಾಗಿದ್ದು, ನಮ್ಮ ಯೋಜನೆಯಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಅರಿವು ಮೂಡಿಸುತ್ತಿದ್ದೇವೆ. ವಿದ್ಯಾರ್ಥಿ ಗಳು ಕಲಿಕೆಯ ಜೊತೆಗೆ ಗಿಡವನ್ನು ನೆಟ್ಟು ಬೆಳೆಸುವ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮನೋಹರ್ ತಿಳಿಸಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಪತ್ರಕರ್ತ ಜಿಗಳಿ ಪ್ರಕಾಶ್ ಮಾತನಾಡಿ, ಧರ್ಮಸ್ಥಳ ಯೋಜನೆ ಮೂಲಕ ಡಾ. ವೀರೇಂದ್ರ ಹೆಗ್ಗಡೆ ಅವರು ಸಮಾಜಮುಖಿ ಯೋಜನೆಗಳನ್ನು ಎಲ್ಲಾ ವರ್ಗಗಳ ಜನರ ಏಳಿಗೆಗೆ ರೂಪಿಸುತ್ತಿದ್ದಾರೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸುಜ್ಞಾನ ನಿಧಿ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.

ಶಾಲೆಯ ಹಿರಿಯ ಶಿಕ್ಷಕ ಬಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕಿ ಶ್ರೀಮತಿ ಸಂತೋಷಿನಿ, ಸೇವಾ ಪ್ರತಿನಿಧಿ ಸುನೀತಾ, ಶಿಕ್ಷಕರಾದ ಜಿ. ಉಮೇಶಪ್ಪ, ಕೆ. ಹೊನ್ನಪ್ಪ, ಡಿ.ಆರ್. ನಾಗರಾಜ್ ಈ ವೇಳೆ ಹಾಜರಿದ್ದರು. ಕಾರ್ಯಕ್ರಮದ ನಂತರ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

error: Content is protected !!