ಹೊನ್ನಾಳಿ, ಜೂ.23- ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅಖಂಡ ಭಾರತದ ಕನಸುಗಾರರೂ ಡಾ. ಶಾಮ ಪ್ರಸಾದ್ ಮುಖರ್ಜಿ ಅವರ ಹುತಾತ್ಮ ದಿನ ಹಾಗೂ ಕರ್ನಾಟಕ ಕೇಸರಿ ಎಂದೇ ಹೆಸರಾದ ಜನಸಂಘದ ಸಂಸ್ಥಾಪಕರಾದ ಡಾ. ಜಗನ್ನಾಥ್ ರಾವ್ ಜೋಶಿಯವರ ಜನುಮದಿನವನ್ನು ಹೊನ್ನಾಳಿ ಸ್ವಾಮಿ ವಿವೇಕಾನಂದ ಭಗತ್ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಮಹೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹೊನ್ನಾಳಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಣ್ಣಪುಟ್ಟ ವ್ಯಾಪಾರ ಮಾಡುವ ಹಾಗೂ ವಯಸ್ಸಾದವರಿಗೆ ಉಚಿತ ಕೊಡೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅರಕೆರೆ ಹನುಮಂತಪ್ಪ, ಕೊನಕನಹಳ್ಳಿ ಮಂಜಣ್ಣ ಸೇರಿದಂತೆ ಟ್ರಸ್ಟ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.