ಹರಿಹರ, ಜೂ.23- ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಪ್ರೌಢ ಶಾಲೆ ವಿಭಾಗ) 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ ದಾವಣಗೆರೆಯ ರಾಮಕೃಷ್ಣ ಆಶ್ರಮದ ತ್ಯಾಗೇಶ್ವರಾನಂದ ಶ್ರೀಗಳು ಸುಮಾರು 65 ಸಾವಿರ ರೂ. ಮೌಲ್ಯದ ಕಲಿಕಾ ಸಾಮಗ್ರಿ ವಿತರಿಸಿದರು.
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು ಹಾಗೂ ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಮೈಗೂಢಿಸಿಕೊಳ್ಳಿ ಎಂದು ಮಕ್ಕಳಿಗೆ ಕಿವಿ ಮಾತು ನೀಡಿದರು.
ಶಾಲೆಯ ಉಪ ಪ್ರಾಚಾರ್ಯ ವಿ.ಬಿ. ಕೊಟ್ರೆಶಪ್ಪ ಹಾಗೂ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ಇದ್ದರು.