ಸದೃಢ ಸಮಾಜಕ್ಕಾಗಿ ಸದೃಢ ಆರೋಗ್ಯ ಮುಖ್ಯ

ಸದೃಢ ಸಮಾಜಕ್ಕಾಗಿ ಸದೃಢ ಆರೋಗ್ಯ ಮುಖ್ಯ

ಮಲೇಬೆನ್ನೂರು, ಜೂ.23- ಪಟ್ಟಣದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾ. ಕುರುಬ ಸಮಾಜದ ಅಧ್ಯಕ್ಷ ಪೂಜಾರ್ ಹಾಲೇಶಪ್ಪ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಜಿ.ಮಂಜುನಾಥ್ ಪಟೇಲ್, ಪುರಸಭೆ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮಿ ಗಂಗಾಧರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಲೇಬೆ ನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ ಅವರು, ಧರ್ಮಸ್ಥಳ ಯೋಜನೆಯಡಿ ನೀಡಿ ರುವ ಆರೋಗ್ಯ ಕಾರ್ಡ್‌ಗಳ ಬಗ್ಗೆ ಮಾಹಿತಿ ನೀಡಿ, ಆರೋಗ್ಯದ ಕಡೆಗೆ ನಿಗಾ ವಹಿಸಿ ಎಂದರು.

ಜಿ.ಮಂಜುನಾಥ್ ಪಟೇಲ್ ಮಾತನಾಡಿ, ಸದೃಢ ಸಮಾಜಕ್ಕಾಗಿ ಸದೃಢ ಆರೋಗ್ಯ ಮುಖ್ಯವಾಗಿದೆ ಎಂದರು.

ಪೂಜಾರ್ ಹಾಲೇಶಪ್ಪ ಮಾತನಾಡಿ, ಆರೋಗ್ಯ ಕಾರ್ಡ್‌ಗಳ ಸದುಪಯೋಗ ಪಡೆದುಕೊಳ್ಳಿ ಎಂದರು.

ಶ್ರೀಮತಿ ವಿಜಯಲಕ್ಷ್ಮಿ ಗಂಗಾಧರ್ ಅವರು, ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಣ್ಣ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬೇಡಿ ಎಂದರು.

ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ತಜ್ಞ ವೈದ್ಯ ಡಾ. ಉಪೇಂದ್ರ ಮಾತನಾಡಿ, ಧರ್ಮಸ್ಥಳ ಆರೋಗ್ಯ ಕಾರ್ಡ್‌ಗಳನ್ನು ಹೊಂದಿರುವವರಿಗೆ ಸಂಪೂರ್ಣ ಚಿಕಿತ್ಸೆ ನೀಡಲಾಗುವುದೆಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಹಾಗೂ ಪತ್ರಕರ್ತ ಜಿಗಳಿ ಪ್ರಕಾಶ್, ಕೊಪ್ಪದ ಗಿರೀಶ್, ಪೂಜಾರ್ ಮಹೇಶ್, ಉಪನ್ಯಾಸಕ ಹಾಲೇಶ್, ಮಹಾವೀರ್ ಜೈನ್ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ವೀರೇಶ್, ವೈದ್ಯರಾದ ಡಾ. ಮೇಘನಾ, ಡಾ.ಗಣೇಶ್, ಶಿವಮೊಗ್ಗದ ಆದರ್ಶ ಕಣ್ಣಿನ ಆಸ್ಪತ್ರೆಯ ಕೌಶಿಕ್, ಭರತ್ ತಾ. ಜ್ಞಾನ ವಿಕಾಸ ಮೇಲ್ವೆಚಾರಕಿ ಸವಿತಾ, ಸೇವಾ ಪ್ರತಿನಿಧಿ ನಾಗರತ್ನ ಹಾಗೂ ಮಹಿಳಾ ಸಂಘಗಳ ಸದಸ್ಯರು ಭಾಗವಹಿಸಿದ್ದರು.

error: Content is protected !!