ಆರೋಗ್ಯ, ಯೋಗ ಕ್ಷೇಮಕ್ಕೆ ಯೋಗ ಮೌಲ್ಯಯುತ ವಿಧಾನ

ಆರೋಗ್ಯ, ಯೋಗ ಕ್ಷೇಮಕ್ಕೆ ಯೋಗ ಮೌಲ್ಯಯುತ ವಿಧಾನ

ನ್ಯಾಯಾಲಯದ ಸಂಕೀರ್ಣದಲ್ಲಿನ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನ್ಯಾ|| ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ, ಜೂ. 23 – ಯೋಗವು ನಮ್ಮ ಪ್ರಾಚೀನ ಸಂಪ್ರದಾಯದಿಂದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಆಯುಷ್ಯ್ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ನ್ಯಾಯಾಲಯದ ಸಂಕೀರ್ಣದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಯೋಗವು ಮೌಲ್ಯಯುತವಾದ ಒಂದು ಸಮಗ್ರ ವಿಧಾನ, ಅದು ಕೇವಲ ವ್ಯಾಯಾಮವಲ್ಲ. ಪ್ರಪಂಚ ಮತ್ತು ಪ್ರಕೃತಿಯೊಂದಿಗೆ ಏಕತೆಯ ಅರ್ಥವನ್ನು ಕೊಂಡುಕೊಳ್ಳುವ ಮಾರ್ಗವಾಗಿದೆ ಎಂದು ವಿವರಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್ ಮಾತನಾಡಿ, ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಧ್ಯೇಯದೊಂದಿಗೆ 2024ರ ಅಂತಾರಾಷ್ರ್ಟೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಜನತೆಯ ಯೋಗ ಕ್ಷೇಮವನ್ನು ಹೆಚ್ಚಿಸುವುದು. ಸಕಾರಾತ್ಮಕ ಮತ್ತು ಸಾಮರಸ್ಯದ ಸಮಾಜವನ್ನು ಬೆಳೆಸುವುದು ಯೋಗದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ಆರ್.ಎನ್.ಪ್ರವೀಣ್‍ಕುಮಾರ್, ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಎಂ.ನಿವೇದಿತಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ, ನ್ಯಾಯಾಂಗ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ್, ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್.ಬಸವರಾಜ್, ಅಂತರರಾಷ್ಟ್ರೀಯ ಯೋಗ ಪ್ರಶಸ್ತಿ ವಿಜೇತರಾದ ಮಂಜುನಾಥ್, ಗೀತಮ್ಮ, ಜಿಲ್ಲಾಸ್ಪತ್ರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಭಾಗದ ಡಾ.ಮಂದಾಕಿನಿ ಸೇರಿದಂತೆ ಸ್ಥಳೀಯ ಎಲ್ಲಾ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರು ಭಾಗವಹಿಸಿದ್ದರು.

error: Content is protected !!