ದಾವಣಗೆರೆ, ಜೂ. 22- ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಸಮಾಜದ ಸಹಾಯ ನಿಧಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾಜದ ಅಧ್ಯಕ್ಷರಾದ ಶ್ರೀಮತಿ ಕೆ.ಕೆ. ಸುಶೀಲಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಾಪೂಜಿ ವಿದ್ಯಾಸಂಸ್ಥೆಯ ನಿವೃತ್ತ ಶಿಕ್ಷಕರಾದ ಶ್ರೀಮತಿ ಕೆ.ಬಿ.ಗಿರಿಜಮ್ಮ ಅವರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಮಕ್ಕಳಿಗೆ ಹಿತವನಚಗಳನ್ನು ನುಡಿದರು.
ಕಾರ್ಯದರ್ಶಿ ದೊಗ್ಗಳ್ಳಿ ಸುವರ್ಣಮ್ಮ ಸ್ವಾಗತಿಸಿದರು. ಯುವತಿಯರ ಬಳಗದವರು ಪ್ರಾರ್ಥಿಸಿದರು. ಸಹಾಯನಿಧಿ ಅಧ್ಯಕ್ಷರಾದ ಶ್ರೀಮತಿ ಸುನೀತಾ ಇಂದೂಧರ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಮಾಜದ ಉಪಾಧ್ಯಕ್ಷರಾದ ಶ್ರೀಮತಿ ಜಯಮ್ಮ ನೀಲಗುಂದ ಚಿಂತನ-ಮಂಥನ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀಮತಿ ಮಂಜು ನಿರೂಪಿಸಿದರು. ಪುಷ್ಪಾ ಐನಳ್ಳಿ ವಂದಿಸಿ ದರು. ಸುಮ ಎಮ್ಮಿ ಉಪಸ್ಥಿತರಿದ್ದರು. ಈ ಎಲ್ಲಾ ಕಾರ್ಯಕ್ರಮಗಳನ್ನು ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ನಡೆಸಿಕೊಟ್ಟರು.