ದಾವಣಗೆರೆ,ಜೂ.24- ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನಗರದ ಹಿರಿಯ ನ್ಯಾಯವಾದಿಗಳೂ, ಹಿರಿಯ ಕಾಂಗ್ರೆಸ್ ಮುಖಂಡರೂ ಆಗಿರುವ ಎನ್. ಜಯದೇವ ನಾಯ್ಕ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಬಂಜಾರ ಸಮಾಜದ ಹಿರಿಯ ಮುಖಂಡರೂ ಆಗಿರುವ ಜಯದೇವ ನಾಯ್ಕ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ರಾಜ್ಯ ಸರ್ಕಾರವು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ಎ. ರಾಜೇಶ್ವರಿ ಅವರು ಆದೇಶ ಹೊರಡಿಸಿದ್ದಾರೆ.
ಹೆಚ್. ಆಂಜನೇಯ ಅಭಿನಂದನೆ : ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಯದೇವ ನಾಯ್ಕ ಅವರನ್ನು ಮಾಜಿ ಸಚಿವ ಹೆಚ್. ಆಂಜನೇಯ ಅಭಿನಂದಿಸಿದ್ದಾರೆ.
ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿರುವ ಜಯದೇವ ನಾಯ್ಕ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಾಂಡ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡುವುದರ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದು ಆಂಜನೇಯ ತಿಳಿಸಿದ್ದಾರೆ.