ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಮಲೇಬೆನ್ನೂರು, ಜೂ.29- ಮಲೆನಾಡಿನಲ್ಲಿ ಸುರಿದ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ ನಾಲ್ಕು ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ.

ಇದರಿಂದಾಗಿ ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾ ಗಿದ್ದು, ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ದೇವಸ್ಥಾನದ ಸ್ನಾನ ಘಟ್ಟದ ಮೆಟ್ಟಿಲುಗಳ ಮೇಲೆ ನದಿ ನೀರು ಹರಿಯುತ್ತಿದೆ.

ಈ ವರ್ಷ ಇದೇ ಮೊದಲ ಬಾರಿಗೆ ನದಿಯಲ್ಲಿ ಇಷ್ಟೊಂದು ಪ್ರಮಾಣದ ನೀರು ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ, ನದಿಗೆ ಇಳಿಯುವ ಸ್ಥಳಗಳಿಗೆ ಬ್ಯಾರಿಕೇಡ್‌ ಗಳನ್ನು ಹಾಕಲಾಗಿದೆ ಎಂದು ದೇವಸ್ಥಾನದ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.

ರೈತರು ಸಂತಸ : ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿರುವುದರಿಂದ ನದಿಪಾತ್ರದ ರೈತರು ಸಂತಸಗೊಂಡಿದ್ದಾರೆ.

error: Content is protected !!