ಹರಿಹರ, ಜು.1- ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ನೀರು ಶೇಖರಣಾ ಘಟಕದ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ನಗರದ ಹಳೇ ದಾವಣಗೆರೆ ವಾಟರ್ ವರ್ಕ್ಸ್ ಬಳಿ ಇರುವ ಖಾಲಿ ಜಾಗಕ್ಕೆ ಭೇಟಿಕೊಟ್ಟು, ಸ್ಥಳ ಮತ್ತು ಕಡತಗಳನ್ನು ಪರಿಶೀಲನೆ ನಡೆಸಿದರು.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ನೂತನ ಸಂಸದ ರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು, ಹರಿಹರ ಜನತೆಗೆ ಕುಡಿಯುವ ನೀರಿನ ಶೇಖರಣಾ ಘಟಕ ಸ್ಥಾಪನೆ ಮಾಡುವುದಾಗಿ ಭರವಸೆಯನ್ನು ನೀಡಿದ್ದರು. ಅವರು ಕೊಟ್ಟ ಭರವಸೆಯನ್ನು ಈಡೇರಿಸುವ ದೃಷ್ಟಿಯಿಂದ ಇಂದು ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರಬಹುದು ಎನ್ನಲಾಗಿದೆ.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುಬಸವರಾಜ್, ನಗರಸಭೆ ಪೌರಾಯುಕ್ತ ಐಗೂರು, ಜಲಸಿರಿ ಅಧಿಕಾರಿ ನವೀನ್, ಸಿಡಿಪಿಓ ಪೂರ್ಣಿಮಾ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.