ದಾವಣಗೆರೆ, ಜು. 3 – ಸ್ಥಳೀಯ ರಾಮನಗರದ ಎಸ್‍ಒಜಿ ಕಾಲೋನಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ ಮನೆಗೆ ಮಹಾನಗರ ಪಾಲಿಕೆಯ ಮೇಯರ್ ವಿನಾಯಕ ಪೈಲ್ವಾನ್, ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಪಾಮೇನಹಳ್ಳಿ ನಾಗರಾಜ್ ಭೇಟಿ ನೀಡಿದ್ದರು.
ಘಟನೆ ಕುರಿತಂತೆ ಸ್ಥಳೀಯರಿಂದ ಮಾಹಿತಿ ಪಡೆದರು. ಐವರು ಗಂಭೀರವಾಗಿ ಗಾಯಗೊಂಡು ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳನ್ನು ಭೇಟಿ ಮಾಡಿ ಧೈರ್ಯ ತುಂಬಿದರು.
ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಾಕ್ಷೇಮ ವಿಚಾರಿಸಿದ ವಿನಾಯಕ ಪೈಲ್ವಾನ್, ಗಡಿಗುಡಾಳ್ ಮಂಜುನಾಥ್, ಪಾಮೇನಹಳ್ಳಿ ನಾಗರಾಜ್ ಅವರು, ಐವರು ಗಾಯಾಳುಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಎಲ್ಲಾ ಗಾಯಾಳುಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಹೇಳಿದರು.