ಮಲೇಬೆನ್ನೂರು, ಜು.3- ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಮಾಗೋಡ ಹಾಲಪ್ಪ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಚೇತನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಲೇರಿಯಾ ಹೇಗೆ ಹರಡುತ್ತದೆ ? ಮತ್ತು ಅದನ್ನು ಹೇಗೆ ತಡೆಗಟ್ಟಬೇಕು ? ಹಾಗೂ ರೋಗ ಬಂದರೆ ಚಿಕಿತ್ಸೆ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ಕರಿಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಂಕರ್, ಪ್ರಕಾಶ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಕಾಶ್ ನಾಯಕ್, ತಿಪ್ಪೇಸ್ವಾಮಿ, ಆರೋಗ್ಯ ಸುರಕ್ಷಣಾಧಿಕಾರಿ ಆಶಾರಾಣಿ, ಆಶಾ ಕಾರ್ಯಕರ್ತೆಯರಾದ ಮಾಲಾಶ್ರೀ, ಪುಷ್ಪಾವತಿ ಭಾಗವಹಿಸಿದ್ದರು.