ಸೇಂಟ್‌ಜಾನ್ಸ್ ಶಾಲೆಯಲ್ಲಿ ಯೋಗ ದಿನಾಚರಣೆ

ಸೇಂಟ್‌ಜಾನ್ಸ್ ಶಾಲೆಯಲ್ಲಿ ಯೋಗ ದಿನಾಚರಣೆ

ದಾವಣಗೆರೆ, ಜು. 5- ನಗರದ ಸೇಂಟ್‍ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ 10 ನೇ ವಿಶ್ವ ಯೋಗ ದಿನವನ್ನು ಉದ್ಘಾಟಿಸಲಾಯಿತು. 

ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಗುರು ಚನ್ನಬಸವರಾಜ್ ಅವರು ಯೋಗ ಸೂತ್ರಗಳ (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ, ಸಮಯ) ಮಹತ್ವವನ್ನು ತಿಳಿಸಿದರು. ಸೇಂಟ್ ಜಾನ್ಸ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯೋಗ ಗುರುಗಳ ಮಾರ್ಗದರ್ಶನದಲ್ಲಿ ಯೋಗ ಮಾಡಿದರು.ಕಾರ್ಯಕ್ರಮ ದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ  ಹೆಚ್.ಅನಿಲ್‍ಕುಮಾರ್‍, ಕಾರ್ಯದರ್ಶಿ ಟಿ.ಎಂ. ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನೆ ಉಪಸ್ಥಿತರಿದ್ದರು. ವಿದ್ಯಾಸಂಸ್ಥೆಯ ಪ್ರಾಂಶುಪಾಲ ಸೈಯ್ಯದ್ ಆರಿಫ್ ಆರ್. ಮತ್ತು ಶ್ರೀಮತಿ ಪ್ರೀತಾ ಟಿ. ರೈ ಹಾಗೂ ಉಪಪ್ರಾಂಶುಪಾಲರಾದ ಶ್ರೀಮತಿ ನೇತ್ರಾವತಿ ಎಸ್.ಎಂ. ಹಾಗೂ ಇತರರು ಪಾಲ್ಗೊಂಡಿದ್ದರು.

error: Content is protected !!