ದಾವಣಗೆರೆ, ಜು. 8 – ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ನ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ನಗರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಅವರ ಪುತ್ರ ಸೈಯದ್ ಖಾಲಿದ್ ಅಹ್ಮದ್ ಅವರ ಕಾರ್ಯ ವೈಖರಿ ಗುರುತಿಸಿ ಈ ನೇಮಕ ಮಾಡಲಾಗಿದೆ. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು.