ದಾವಣಗೆರೆ, ಜ.5- ಬಿಜೆಪಿ ವತಿಯಿಂದ ನಾಳೆ ಶುಕ್ರವಾರ ನಡೆಯಲಿರುವ ಕಾರ್ಯಕ್ರಮ ನಿಮಿತ್ತ ಮುನ್ನಾ ದಿನವಾದ ಗುರುವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಗರಕ್ಕಾಗಮಿಸಿ ದರು. ಜಿಎಂಐಟಿ ಗೆ ಆಗಮಿಸಿದ ವೇಳೆ ನಡ್ಡಾ ಅವರನ್ನು ಸ್ವಾಗತಿಸಲಾಯಿತು. ಈ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಬಿ.ಸಿ. ನಾಗೇಶ್, ಭೈರತಿ ಬಸವರಾಜ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರುಗಳಾದ ಎಂ.ಪಿ.ರೇಣುಕಾಚಾರ್ಯ, ಎಸ್.ವಿ. ರಾಮಚಂದ್ರ, ಪೂರ್ಣಿಮಾ ಶ್ರೀನಿವಾಸ್, ಜೆ.ಹೆಚ್.ತಿಪ್ಪಾರೆಡ್ಡಿ, ಚಂದ್ರಪ್ಪ ಸೇರಿದಂತೆ ಇನ್ನಿತರರು ಇದ್ದರು.
ನಗರಕ್ಕಾಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸ್ವಾಗತ
