ದಾವಣಗೆರೆ, ಜು.11- ದಾವಣಗೆರೆ ಚಾರ್ಟರ್ಡ್ ಅಕೌಂಟೆಂಟ್ಸ್ ಅಸೋಸಿಯೇಷನ್ನಿನ ಅಧ್ಯಕ್ಷರಾಗಿ ಹಿರಿಯ ಲೆಕ್ಕಪರಿಶೋಧಕ ಉಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಎಸ್. ಲಿಂಗರಾಜ್ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ಜ್ಯೋತಿ, ಜಂಟಿ ಕಾರ್ಯದರ್ಶಿಯಾಗಿ ಎಸ್.ಓಂಕಾರಪ್ಪ ಆಯ್ಕೆಯಾಗಿದ್ದಾರೆ. ನಗರದ ಪಿ.ಬಿ. ರಸ್ತೆಯಲ್ಲಿರುವ ಚಾರ್ಟರ್ಡ್ ಅಕೌಂಟೆಂಟ್ಸ್ ಭವನದಲ್ಲಿ ಇಂದು ನಡೆದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು.