ದಾವಣಗೆರೆ, ಜು. 11 – ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ ನಡೆಸುವ ದೇಶದ ಪ್ರಮುಖ ಪರೀಕ್ಷೆಗಳಲ್ಲೊಂದಾದ `ಚಾರ್ಟರ್ಡ್ ಅಕೌಂಟೆಂಟ್’ (C.A.) ಅಂತಿಮ ಪರೀಕ್ಷೆಯಲ್ಲಿ ನಗರದ ಕು. ಭಾವನಾ ಶೇಟ್ ಪ್ರಥಮ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ.
ಸ್ಥಳೀಯ ಎಸ್.ಬಿ.ಸಿ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪೂರೈಸಿದ್ದ ಭಾವನಾ ಅವರನ್ನು ಕಾಲೇಜಿನ ಅಧ್ಯಕ್ಷ ಬಿ.ಸಿ. ಉಮಾಪತಿ, ಶ್ರೀ ವಿನಾಯಕ ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಡಾ. ಅಥಣಿ ವೀರಣ್ಣ, ಪ್ರಾಂಶುಪಾಲ ಡಾ. ಕೆ. ಷಣ್ಮುಖ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಅಭಿನಂದಿಸಿದ್ದಾರೆ.