ಬೆಂಗಳೂರು, ಜು. 14- ಸೋಮನಹಳ್ಳಿ ಬಳಿ ನಿರ್ಮಿಸಿರುವ ಬಾಬು ಜಗಜೀವನ್ ರಾಮ್ ಭವನ ಮತ್ತು ಸಂಶೋಧನಾ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.
ಉದ್ಘಾಟನಾ ಸಮಾ ರಂಭದಲ್ಲಿ ಮಾಜಿ ಸಚಿವ ಎಚ್. ಆಂಜನೇಯ ಮತ್ತು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು ಸಂಪ್ರದಾಯಿಕ ತಮಟೆ ವಾದ್ಯ ಭಾರಿಸಿ ನೆರೆದಿದ್ದ ಸಾವಿರಾರು ಸಮಾಜ ಬಾಂಧವರ ಗಮನ ಸೆಳೆದರು.
ಬಾಬು ಜಗಜೀವನ್ ರಾಮ್ ಅವರ ಜೀವನ, ಸಾಧನೆಗಳನ್ನು ಅಧ್ಯಯನ ಮಾಡುವವರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಎಚ್.ಆಂಜನೇಯ ಅವರು 106 ಕೋಟಿ ರೂ. ವೆಚ್ಚದ ಬಾಬು ಜಗಜೀವನ ರಾಮ್ ಭವನ ಮತ್ತು ಸಂಶೋದನಾ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದೇ ಸಂದರ್ಭದಲ್ಲಿ ಬಾಬು ಜಗಜೀವಮ್ ರಾಮ್ ಭವನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಎಚ್.ಆಂಜನೇಯ ನೇತೃತ್ವದಲ್ಲಿ ಮುಂದಾಳತ್ವ ವಹಿಸಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ ಸಲ್ಲಿಸಿದ್ದಾರೆ.