ದಾವಣಗೆರೆ, ಜು.14- ರಾಜ್ಯದ ಲ್ಲಿನ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಇಂದು ಎಬಿವಿಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಕಚೇರಿ ಮತ್ತು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿ ರುವ ಸರ್ಕಾರ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡದೇ ಇರುವುದು, ಸ್ತ್ರೀ ಶಕ್ತಿ ಯೋಜನೆಯಿಂದ ಅತಿ ಹೆಚ್ಚು ಮಹಿಳೆಯರು ಬಸ್‍ಗಳಲ್ಲಿ ಓಡಾಟ ಮಾಡುತ್ತಿರುವುದರಿಂದ, ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ನೀಡುವುದು ಸರ್ಕಾರಗಳ ಕರ್ತವ್ಯ, ಆದರೆ ಕಳೆದ ವರ್ಷದ ವಿದ್ಯಾರ್ಥಿ ವೇತನವು ವಿದ್ಯಾರ್ಥಿಗಳಿಗೆ ಸರಿಯಾಗಿ ಜಮೆಯಾಗಿರುವುದಿಲ್ಲ.
ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ, ವಿದ್ಯಾರ್ಥಿ ಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆಯನ್ನೂ ಸಹ ಹೆಚ್ಚಳ ಮಾಡಬೇಕು. ಶಾಲಾ-ಕಾಲೇಜುಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತಾಗಬೇಕು
ರಾಜ್ಯದ ಎಲ್ಲ ವಿಶ್ವವಿದ್ಯಾ ಲಯ ಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮ ರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು. ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣ ವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗ ಬೇಕು. ಹಾಸ್ಟೆಲ್‌ಗಳ ಮೂಲ ಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ಗಮನ ಹರಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡ ಬೇಕೆಂದು ಎಬಿವಿಪಿ ಸಚಿವರನ್ನು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ವಿಭಾಗದ ಸಂಚಾಲಕ ವರುಣ್ ಕೌಟಿ, ವಿಭಾಗದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕೊಳ್ಳೇರ, ಜಿಲ್ಲಾ ಸಂಚಾಲಕ ನವೀನ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ತನುಷ ಮತ್ತು ರತನ್, ನಗರ ಸಹ ಕಾರ್ಯದರ್ಶಿ ಮೋಹಿತ್, ನಗರ ಕಾರ್ಯಕಾರಿಣಿ ತಿಪ್ಪೇಶ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.