ನಗರದಲ್ಲಿ ಇಂದು ಉಪನ್ಯಾಸ ಕಾರ್ಯಕ್ರಮ

ನಗರದಲ್ಲಿ ಇಂದು ಉಪನ್ಯಾಸ ಕಾರ್ಯಕ್ರಮ

ಜಿಲ್ಲಾ ವಕೀಲರ ಸಂಘ, ಆರ್.ಎಲ್. ಲಾ-ಕಾಲೇಜ್ ಹಾಗೂ ಲಾಯರ್ ಲಾ-ಪಬ್ಲಿಷರ್ಸ್ (ಬೆಂಗಳೂರು) ಇವರುಗಳ ಸಹಯೋಗದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಉಪನ್ಯಾಸ ಮಾಲಿಕೆ-10 ನೂತನ ಅಪರಾಧಿಕ ಕಾನೂನುಗಳ ಕೈಪಿಡಿ ಪುಸ್ತಕ ಲೋಕಾರ್ಪಣೆಯನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಆರ್.ಎಲ್. ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ಆಗಮಿಸಲಿದ್ದು, ನಿವೃತ್ತ ಪೊಲೀಸ್ ಮಹಾನಿರ್ದೇಶಕ‌ ಹಾಗೂ ಕೃತಿ ಕರ್ತೃ ಡಾ. ಡಿ.ವಿ. ಗುರುಪ್ರಸಾದ್, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ’ ವಿಷಯದ ಕುರಿತು ಉಪನ್ಯಾಸ ನೀಡಲಿರುವರು ಎಂದು ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಎಂದು ತಿಳಿಸಿದ್ದಾರೆ.

error: Content is protected !!