ಕಾವೇರಮ್ಮ ಶಾಲೆಯಲ್ಲಿ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ

ಕಾವೇರಮ್ಮ ಶಾಲೆಯಲ್ಲಿ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ

ದಾವಣಗೆರೆ, ಜು. 19 – ನಗರದ ಕಾವೇರಮ್ಮ ಶಾಲೆಯಲ್ಲಿ ಮೊನ್ನೆ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್‌ ಶಿಬಿರವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು.

ಶಾಲೆಯಿಂದ ಡಾಂಗೆ ಪಾರ್ಕ್ ವರೆಗೆ ಜಾಥಾ ನಡೆಸಿ ಪಾರ್ಕ್ ಸ್ವಚ್ಛಗೊಳಿಸಲಾಯಿತಲ್ಲದೇ, ಸುತ್ತಮುತ್ತಲು ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಜಾಗೃತಿ ಮೂಡಿಸಲಾಯಿತು.

ಶಾಲೆಯಲ್ಲಿ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರವನ್ನು ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಜೆ.ವಿ. ಗಂಗಾಧರ್ ನೇತೃತ್ವದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಆರೈಕೆ ಆಸ್ಪತ್ರೆಯ ಡಾ. ರವಿಕುಮಾರ್ ಪಾಲ್ಗೊಂಡು ಡೆಂಗ್ಯೂ ಮತ್ತು ಮಲೇರಿಯಾ ಹರಡುವಿಕೆ ತಡೆಗಟ್ಟುವ ಬಗ್ಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಸುನೀತ, ಡಾ. ನಾಗರಾಜ್, ದುರ್ಗೇಶ್ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

error: Content is protected !!