ಹರಪನಹಳ್ಳಿ, ಜು.19- ಸರ್ಕಾರಿ ಆಯುರ್ವೇದ ಆಸ್ಪತ್ರೆ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ನಮ್ಮ ಸುತ್ತ ಮುತ್ತಲಿನ ಪರಿಸರ ಶುಚಿಯಾಗಿಡದಿದ್ದರೆ ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆಯುರ್ವೇದ ಆಸ್ಪತ್ರೆಯ ವೈದ್ಯ ಶಿವಕುಮಾರ ಗಾಣಿಗ ಮಕ್ಕಳಿಗೆ ಸಲಹೆ ನೀಡಿದರು. ಈ ವೇಳೆ ವೈದ್ಯರಾದ ಗೀತಾ, ಸವಿತಾ, ವಿಶ್ವಾಸ್, ಆಸ್ಪತ್ರೆಯ ಸಿಬ್ಬಂದಿ ಮತ್ತು ಶಿಕ್ಷಕರಿದ್ದರು.
ಮಕ್ಕಳಿಗೆ ಡೆಂಗ್ಯೂ ನಿಯಂತ್ರಣ ಜಾಗೃತಿ
![07 dengue 20.07.2024 ಮಕ್ಕಳಿಗೆ ಡೆಂಗ್ಯೂ ನಿಯಂತ್ರಣ ಜಾಗೃತಿ](https://janathavani.com/wp-content/uploads/2024/07/07-dengue-20.07.2024-860x403.jpg)