ನಿರಂತರ ಮಳೆಯಿಂದ ಮನೆಗಳಿಗೆ ಹಾನಿ

ನಿರಂತರ ಮಳೆಯಿಂದ ಮನೆಗಳಿಗೆ ಹಾನಿ

ಹರಪನಹಳ್ಳಿ, ಜು. 22 – ತಾಲ್ಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮೂರು ಮನೆಗಳಿಗೆಭಾಗಶಃ ಹಾನಿಯಾಗಿದೆ ಎಂದು ತಹಶೀಲ್ದಾರ್ ಬಿ.ವಿ. ಗಿರೀಶ್‌ಬಾಬು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು ತಾಲ್ಲೂಕಿನ ಕಂಚಿಕೇರಿ ಗ್ರಾಮದ ಮಲ್ಲಿಕಾರ್ಜುನ್ ಎಂಬುವರ ಮನೆಯ ಮೇಲ್ಛಾವಣಿ ಮಳೆಗೆ ಕುಸಿದು ಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕಮ್ಮತ್ತಹಳ್ಳಿಯ ಪುರ್ಲಪ್ಪ ಮತ್ತು  ಚಂದ್ರಮ್ಮ ಎಂಬುವವರ ಮನೆಗಳು ಭಾಗಶಃ ಹಾನಿಯಾಗಿವೆ ಎಂದು ತಿಳಿಸಿದ್ದಾರೆ.

error: Content is protected !!