ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್

ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್

ಸರ್ವರಿಗೂ ಸಮಪಾಲು, ಸಮಬಾಳು ತತ್ವಕ್ಕೆ ಪೂಕರವಾಗಿದೆ. ದೇಶದ 9 ವಲಯಗಳಿಗೆ ಆದ್ಯತೆ ನೀಡಿದೆ. ರೈತರು, ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಪ್ರಮುಖ ಯೋಜನೆಗಳ ಮೂಲಕ ದೇಶದ ಕೋಟ್ಯಂತರ ಜನರಿಗೆ ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಯುವಕ-ಯುವತಿಯರಿಗೆ ಉದ್ಯೋಗ ನೀಡುವ ಜೊತೆಗೆ 1 ಕೋಟಿ ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದಾರೆ.

ದೇಶದ ಅಭಿವೃದ್ಧಿಗೆ ಇಂದು ಮಂಡನೆಯಾಗಿರುವ ಬಜೆಟ್ ಜನಸ್ನೇಹಿ ಮತ್ತು ಜನ ಸಾಮಾನ್ಯರ ಬಜೆಟ್ ಎಂಬುದರಲ್ಲಿ ಎರಡು ಮಾತಿಲ್ಲ. ರೈತರು, ಬಡವರು, ಮಹಿಳೆಯರು, ವಿದ್ಯಾರ್ಥಿಗಳು ಹೀಗೆ ಎಲ್ಲಾ ವರ್ಗದವರಿಗೂ ಬಜೆಟ್ ನಲ್ಲಿ ಪಾಲು ನೀಡಿರುವುದು ಸ್ವಾಗತಾರ್ಹ.

– ಶಿವನಗೌಡ ಪಾಟೀಲ್, ಪಾಲಿಕೆ ಮಾಜಿ ಸದಸ್ಯ

error: Content is protected !!