ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್‌. ಮಂಜುನಾಥ್‌ಗೆ ಸನ್ಮಾನ

ಆದಿ ಜಾಂಬವ ನಿಗಮದ ಅಧ್ಯಕ್ಷ  ಜಿ.ಎಸ್‌. ಮಂಜುನಾಥ್‌ಗೆ ಸನ್ಮಾನ

ದಾವಣಗೆರೆ, ಜು. 25 – ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್ ಗೆ  ಆಗಮಿಸಿದ ಸಂದರ್ಭದಲ್ಲಿ ಅವರನ್ನು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪಾಂಡುರಾಜ್ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಮಂಜುನಾಥ್ ಅವರನ್ನು ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು. ಸಿ. ದೇವರಾಜ್, ಡಿ. ನಾಗರಾಜ್, ನೀರು ಸರಬರಾಜು ಕೇಂದ್ರದ ತಿಮ್ಮಗೌಡ ಮತ್ತಿತರರು ಉಪಸ್ಥಿತರಿದ್ದರು.

error: Content is protected !!