ಹರಪನಹಳ್ಳಿ, ಜು.28- ತಾಲ್ಲೂಕಿನ ತುಂಗಭದ್ರಾ ನದಿ ತೀರದಲ್ಲಿರುವ ಗರ್ಭಗುಡಿ, ಹಲವಾಗಲು, ತಾವರಗುಂದಿ ಗ್ರಾಮಗಳಿಗೆ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಭೇಟಿ ನೀಡಿ, ತುಂಗಭದ್ರಾ ನದಿಯ ನೆರೆಹಾವಳಿ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗ್ರಾಮದ ಮುಖಂಡರು ಹಾಗೂ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಸಿದರು. ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳಿಗೆ ನೆರೆಹಾವಳಿ ನಿರ್ವಹಣೆ ಬಗ್ಗೆ ಸೂಕ್ತ ಕ್ರಮವಹಿಸಲು ಸಲಹೆ – ಸೂಚನೆ ನೀಡಿದರು. ಈ ವೇಳೆ ತಹಶೀಲ್ದಾರ್ ಗಿರೀಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತೂರು ಬಸವರಾಜ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮತ್ತು ತಾಲ್ಲೂಕು ನೋಡಲ್ ಅಧಿಕಾರಿಗಳು ಇದ್ದರು.
September 14, 2024