ದಾವಣಗೆರೆ, ಜು. 30- ಬಾಪೂಜಿ ವಿದ್ಯಾಸಂಸ್ಥೆಯ ಎ.ಆರ್.ಜಿ. ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಜೆ.ಕೆ. ಮಲ್ಲಿಕಾರ್ಜುನಪ್ಪ ಅವರು ನಾಳೆ ಬುಧವಾರ ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ.
ಸುದೀರ್ಘ 36 ವರ್ಷಗಳ ಕಾಲ ಅಧ್ಯಾಪಕರಾಗಿದ್ದ ಅವರು, ಇತಿಹಾಸ ಸಂಶೋಧಕರಾಗಿ, ಬೋಧಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ವೃತ್ತಿಯ ಜೊತೆ-ಜೊತೆಗೆ ಹಲವಾರು ಸಾಮಾಜಿಕ ಸಂಘಟನೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇತಿಹಾಸ ಸಂಶೋಧಕರಾಗಿ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಿದ್ದಾರೆ.
ಇತಿಹಾಸ, ಸಂಸ್ಕೃತಿ, ಪರಂಪರೆ, ವ್ಯಕ್ತಿತ್ವ ನಿರ್ಮಾಣ, ಸುಕ್ಷೇಮ ಮತ್ತು ಸುರಕ್ಷಾ ಆರೋಗ್ಯ ಮುಂತಾದ ವಿಷಯಗಳ ಕುರಿತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ, ನೂರಾರು ಲೇಖನಗಳನ್ನು ಮಂಡಿಸಿ ಪ್ರಕಟಿಸಿದ್ದಾರೆ.
ಮಲ್ಲಿಕಾರ್ಜುನಪ್ಪ ಅವರ ಈ ಸೇವೆಯನ್ನು ಗೌರವಿಸಿದ ಕಜಕಿಸ್ಥಾನದ ದಿ ಓಪನ್ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಫಾರ್ ಕಾಂಪ್ಲಿಮೆಂಟರಿ ಮೆಡಿಸಿನ್ ಸಂಸ್ಥೆಯು ಅವರಿಗೆ ಗೌರವ ಡಾಕ್ಟರೇಟ್ ನೀಡಿದೆ.